ಉಡುಪಿ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಭಾನುವಾರ ತಡರಾತ್ರಿ ನಡೆದಿದೆ. ಮೃತಪಟ್ಟ ಯುವಕ ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.

ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ.ಸಂತೋಷ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದುರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂತೋಷ್ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನಾಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ, ಕೋಟ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಟಿ ಮೊದಲಾದವರು ಆಗಮಿಸಿ, ಪರಿಶೀಲಿಸಿದ್ದು ನಾಲ್ವರು ಯುವಕರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಹೆಚ್ಚಿನ ವಿವರ ತಿಳಿಯಬೇಕಿದೆ.
ಇದನ್ನೂ ಓದಿ: ಮನರೇಗಾ ರದ್ದು, ಹೊಸ ‘ವಿಕಸಿತ್ ಭಾರತ್-ಜಿ ರಾಮ್ ಜಿ’ ಯೋಜನೆ ಜಾರಿಗೆ : ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸಿನ ಹೊರೆ



















