ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಹುಲಿಕೆರೆ, ನಾಗೇನಹಳ್ಳಿ ಕೆರೆ ತುಂಬಿಸುವ ಯೋಜನೆಯ ವಿಚಾರವಾಗಿ ರೈತರ ಮಧ್ಯೆ ಗಲಾಟೆ ನಡೆದಿದೆ. ಈ ಯೋಜನೆ ನಡೆಸಿದರೆ ನಮಗೆ ನೀರಿಲ್ಲದಂತಾಗುತ್ತದೆ ಎಂದು ಕಡೂರು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ನೀರಿಗಾಗಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ರೈತರು ಪರವಾಗಿ ಬ್ಯಾಟ್ ಬೀಸಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಮಾತಿಗೆ ಮಾತು ಬೆಳೆದಿದ್ದು, ಕಡೂರು ತಾಲೂಕಿನ ಅಗ್ರಹಾರ ಬಳಿ ರೈತರ ಮದ್ಯೆಯೇ ಗಲಾಟೆ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. 10 ಕೋಟಿ ರೂ. ವೆಚ್ಚದಲ್ಲಿ ಕೆರೆ ತುಂಬಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಯೋಜನೆಯೇ ಈಗ ಅನ್ನದಾತರ ಮಧ್ಯದ ಫೈಟ್ ಗೆ ಕಾರಣವಾಗಿದೆ.