ಶಿವಮೊಗ್ಗ: ಮದ್ಯ ತರುವ ವಿಚಾರಕ್ಕೆ ನಾಲ್ವರು ಬಡಿದಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೇಕಟ್ಟೆ ಸರ್ಕಲ್ ಬಳಿ ನಡೆದಿದೆ.
ಓರ್ವನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸಿಸಿಟಿವಿಯಲ್ಲಿ ಮೂರ್ನಾಲ್ಕು ಜನರು ಹೊಡೆದಾಡುತ್ತಿರುವ ದೃಶ್ಯ ಸೆರೆಯಾಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.