ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಕಬ್ಬು ಕತ್ತರಿಸುವ ಮಚ್ಚಿನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ದುತ್ತರಗಾಂವ್ ಗ್ರಾಮದಲ್ಲಿ ನಡೆದಿದೆ.
ದುತ್ತರಗಾಂವವ್ ಗ್ರಾಮದ ನಿವಾಸಿ ಹಣಮಂತ ಹಲ್ಲೆಗೊಳಗಾದ ಯುವಕ. ಅದೇ ಗ್ರಾಮದ ಆಕಾಶ ಮತ್ತು ಅಂಬರೀಷ ಮಾರಣಾಂತಿಕ ಹಲ್ಲೆ ಮಾಡಿದ ಯುವಕರು.
ಬೈಕ್ ಓವರ್ ಟೇಕ್ ಮಾಡಿದ ಕಾರಣಕ್ಕೆ ಶುರುವಾದ ಜಗಳ, ಮಾತಿಗೆ ಮಾತು ಬೆಳೆದಿದೆ. ಇದರಿಂದ ಜಗಳ ವಿಕೋಪಕ್ಕೆ ತಿರುಗಿ ಮಾರಕಾಸ್ತ್ರ ತಂದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದ ಯುವಕನ ಸ್ಥತಿ ಗಂಭೀರವಾಗಿದ್ದು, ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.
ಸದ್ಯ ನಿಂಬರ್ಗಾ ಪೊಲೀಸರು ಆರೋಪಿಗಳಾದ ಆಕಾಶ ಮತ್ತು ಅಂಬರೀಷನ ಮೇಲೆ ಕೊಲೆ ಯತ್ನ ಆರೋಪದಡಿ ದೂರು ದಾಖಲಿಸಿಕೊಂಡು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರು | ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು



















