ಬೆಂಗಳೂರು : ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ನೀಡಿದ ಹೇಳಿಕೆಯೊಂದು ಸ್ಯಾಂಡಲ್ವುಡ್ನಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಚಕ್ರವರ್ತಿ ಚಂದ್ರಚೂಡ್ ವಿರುದ್ದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ ದೂರು ನೀಡಿದೆ.
ಚಕ್ರವರ್ತಿ ಚಂದ್ರಚೂಡ್ ಇತ್ತೀಚಿಗೆ ನೀಡಿದ ಹೇಳಿಕೆಯೊಂದು ಸೋಷಿಯಲ್ ಮೀಡಿಯಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ‘ಕೆಲವು ನಿರ್ಮಾಪಕರು ಹೀರೋಗಳ ವಿಚಾರ ಬಂದರೆ ಅವರ ಮನೆಯ ಕಮೋಡ್ ಕೂಡ ಚಿನ್ನದಲ್ಲಿ ನೋಡಿಕೊಳ್ಳುತ್ತಾರೆ. ಹೀರೋಗಳಿಗೆ ಕಾಂಡೋಮ್ ಸಪ್ಲೈ ಕೂಡ ಮಾಡುತ್ತಾರೆ. ಆದರೆ ತಂತ್ರಜ್ಞರು, ಲೈಟ್ ಬಾಯ್ಸ್, ಪ್ರೊಕ್ಷಡನ್ ಹುಡುಗರು, ರೈಟರ್ ವಿಚಾರ ಬಂದರೆ ಸರಿಯಾಗಿ ಹಣ ಕೊಡಲ್ಲ. ಹೇಳಿಕೊಳ್ಳೋಕೆ ಆಗಲ್ಲ. ದೊಡ್ಡ ದೊಡ್ಡ ನಿರ್ಮಾಪಕರು ಈ ರೀತಿ ಮಾಡುತ್ತಾರೆ’ ಎಂದು ಚಂದ್ರಚೂಡ್ ಮಾತನಾಡಿದ್ದರು.\

ಇದೀಗ ಚಂದ್ರಚೂಡ್ ವಿರುದ್ಧ ನಿರ್ಮಾಪಕರ ಸಂಘ ಸಿಡಿದೆದ್ದಿದ್ದು, ‘ಅಶ್ಲೀಲ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ಸಾರ್ವಜನಿಕವಾಗಿ ಯೂಟ್ಯೂಬ್ ಮೂಲಕ ನೀಡಿದ್ದಾರೆ. ಈ ಹೇಳಿಕೆಗಳು ಸಂಪೂರ್ಣ ಕನ್ನಡ ಚಲನಚಿತ್ರ ನಿರ್ಮಾಪಕರ ಗೌರವ, ಘನತೆ ಹಾಗೂ ಮಾನಕ್ಕೆ ಗಂಭೀರ ಹಾನಿ ಉಂಟುಮಾಡಿದೆ. ಸಮಾಜದಲ್ಲಿ ನಿರ್ಮಾಪಕರ ಬಗ್ಗೆ ತಪ್ಪು ಕಲ್ಪನೆ, ದ್ವೇಷ ಮತ್ತು ಅವಿಶ್ವಾಸ ಮೂಡಿಸುವ ಉದ್ದೇಶದಿಂದ ಮಾತನಾಡಿದ್ದಾರೆ’ ಆಕ್ರೋಶ ಹೊರಹಾಕಿದೆ. ಇನ್ನು, ಚಂದ್ರಚೂಡ್ ಸಮಾಜದ ದ್ವೇಷ ಉಂಟುಮಾಡುವ ಕೆಲಸ ಮಾಡಿದ್ದಾರೆ. ಚಂದ್ರಚೂಡ್ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು, ಜೊತೆಗೆ FIR ದಾಖಲಿಸುವಂತೆ ಕೋರಿ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘ ಚಂದ್ರಚೂಡ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದೆ.
ವಿವಾದದ ಬೆನ್ನಲ್ಲೇ ಸ್ಪಷ್ಟೀಕರಣ ನೀಡಿದ ಚಂದ್ರಚೂಡ್
ನಾನು ಮಾತನಾಡಿರುವುದು ತಮಿಳು ಚಿತ್ರರಂಗದ ಬಗ್ಗೆ ಅಲ್ಲಿಯ ವಾತಾವರಣದ ಬಗ್ಗೆ ಅಲ್ಲಿನ ರಾಜಕೀಯ ವ್ಯವಸ್ಥೆಯ ಬಗ್ಗೆ ಹೊರತು ಕನ್ನಡ ನಿರ್ಮಾಪಕರ ಬಗ್ಗೆ ಆಗಲಿ ಕನ್ನಡ ಚಿತ್ರರಂಗದ ಬಗ್ಗೆ ಅಲ್ಲವೇ ಅಲ್ಲ. ಅಲ್ಲದೆ “ಕಮೋಡ್ ಟು ಕಾಂಡೋಮ್ ” ಅನ್ನುವ ಉಪಮೆಯನ್ನು ಬಳಸಿದ್ದೇನೆ ಅಷ್ಟೇ ವಿನಃ ಯಾವುದೇ ನಿರ್ಮಾಪಕರ ವಿರುದ್ಧ ಅಲ್ಲ. ಜೊತೆಗೆ ಒಬ್ಬ ಕನ್ನಡ ನಿರ್ಮಾಪಕ ತಮಿಳು ರಾಜಕೀಯಕ್ಕೆ ಹೇಗೆ ಸಿಲುಕಿದ್ದಾರೆ ಎಂಬ ಹಿನ್ನೆಲೆಯಲ್ಲೂ ಸಹ ದನಿ ಎತ್ತಿದ್ದೇನೆ. ತಮಿಳು ಚಿತ್ರರಂಗದಲ್ಲಿಯೂ ಕೆಲಸ ಮಾಡಿದ ಅನುಭವ ಇರುವುದರಿಂದ ಅಲ್ಲಿ ನಾಯಕ ಕೇಂದ್ರೀತ ವಾತಾವರಣ ಹೇಗಿದೆ ಮತ್ತು ಅದರ ಪರಿಣಾಮಗಳನ್ನು ವಿವರಿಸಿದ್ದೇನೆ. ಅಖಾಡ videoದ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳದೆ ಒಂದು ಭಾಗವನ್ನು ಮಾತ್ರ ಕತ್ತರಿಸಿ ವೈರಲ್ ಮಾಡುತ್ತಿರುವುದು ಈ ಪ್ರಮಾದ. ಯಾವುದೇ ನಿರ್ಮಾಪಕರು ಇದರಿಂದ ನೊಂದುಕೊಳ್ಳುವ ಅವಶ್ಯಕತೆಯೂ ಇಲ್ಲ ಎಂದು ಚಂದ್ರಚೂಡ್ ತಿಳಿಸಿದ್ದಾರೆ.
ಇದನ್ನೂ ಓದಿ : ರಾಜ್ಯದ ಉರ್ದು ಮಾಧ್ಯಮ ಶಾಲಾ ವೇಳಾಪಟ್ಟಿ ಬದಲಾವಣೆ | ಕಾರಣವೇನು?



















