ಹಾಸನ: ವಿಪ ಸದಸ್ಯ ಸೂರಜ್ ರೇವಣ್ಣ (JDS MLC Dr Suraj Revanna) ವಿರುದ್ಧ ಮತ್ತೊಂದು ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಅಡಿಯಲ್ಲಿ ಎಸ್ಐಆರ್ ದಾಖಲಾಗಿದೆ.
ಕೊರೊನ ಸಂದರ್ಭದಲ್ಲಿ ನನ್ನ ಮೇಲೆ ಕೂಡ ಇದೇ ರೀತಿಯ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮತ್ತೋರ್ವ ಸಂತ್ರಸ್ತ ದೂರು ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲೇ ಸೂರಜ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಇದಕ್ಕಿಂತಲೂ ಮುಂಚೆ ಸಂತ್ರಸ್ತನ ವಿರುದ್ಧವೇ ದೂರು ನೀಡಿದ್ದವ ಇದೀಗ ಸೂರಜ್ ವಿರುದ್ಧ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಮೂರು ವರ್ಷಗಳ ಹಿಂದೆ ತನ್ನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಂದು ಆರೋಪಿಸಿ ಸೂರಜ್ ರೇವಣ್ಣ ಆಪ್ತನಾಗಿದ್ದ ಹೊಳೆನರಸೀಪುರ ತಾಲ್ಲೂಕು ಮೂಲದ ಯುವಕ ದೂರು ನೀಡಿದ್ದಾನೆ. ಈ ಮೂಲಕ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲೇ ಸೂರಜ್ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ.
ಎರಡನೇ ಕೇಸ್ ನ ಸಂತ್ರಸ್ತ ಜೂನ್ 21 ರಂದು ಡಾ ಸೂರಜ್ ಅವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಮೊದಲ ಪ್ರಕರಣದ ಸಂತ್ರಸ್ತನ ವಿರುದ್ಧ ದೂರು ನೀಡಿದ್ದ. ಆದರೆ, ಈಗ ಆಪ್ತ ಉಲ್ಟಾ ಹೊಡೆದು ಸೂರಜ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಅರಕಲಗೂಡು ಮೂಲದ ಯುವಕನ(ಮೊದಲ ಪ್ರಕರಣದ ಸಂತ್ರಸ್ತ) ವಿರುದ್ಧ ದೂರು ನೀಡಲು ಸೂರಜ್ ಒತ್ತಡ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾನೆ. ಹೀಗಾಗಿ ಸೂರಜ್ ಗೂ ಸಂಕಷ್ಟ ಶುರುವಾಗಿದೆ.
ಈಗಾಗಲೇ ಸಲಿಂಗ ಕಾಮ ಪ್ರಕರಣದಲ್ಲಿ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿದ್ದ ಎಂಎಲ್‌ಸಿ ಸೂರಜ್ ರೇವಣ್ಣನನ್ನು (Suraj Revanna Case) 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.