ಬೆಂಗಳೂರು : ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆದಿದ್ದು, ಬಹುಮತದೊಂದಿಗೆ ಹಿರಿಯ ನಟಿ ಜಯಮಾಲಾ ಅವರು ಭರ್ಜರಿ ಜಯಗಳಿಸಿ ಫಿಲ್ಮ್ ಚೇಂಬರ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಭಾರಿಯ ಫಿಲ್ಮ್ ಚೇಂಬರ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಟಿ ಜಯಮಾಲಾ ಹಾಗೂ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಇಬ್ಬರಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇತ್ತು. ಇದೀಗ ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 512 ವೋಟ್ ಪಡೆದು ನಟಿ ಜಯಮಾಲಾ ಅವರು ಗೆಲುವು ಸಾಧಿಸಿದ್ದಾರೆ.
ಎಲ್ಲರಿಗೂ ತಿಳಿದಿರುವಂತೆ 2008ರಲ್ಲಿ ಜಯಮಾಲಾ ಫಿಲ್ಮ್ ಚೇಂಬರ್ ಅಧ್ಯಕ್ಷೆಯಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದರು. ಇದೀಗ 16 ವರ್ಷಗಳ ಬಳಿಕ ಅದೃಷ್ಟ ಮತ್ತೆ ಅವರ ಪಾಲಾಗಿದೆ. ಈ ಬಾರಿ ಒಟ್ಟು 1,430 ಮಂದಿ ಮತ ಚಲಾಯಿಸಬೇಕಿತ್ತು. ಆದ್ರೆ, 843 ಮತಗಳು ಚಲಾವಣೆಯಾಗಿದೆ. ಫಿಲ್ಮ್ ಚೇಂಬರ್ ಪಕ್ಕದಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಇಂದು ಚುನಾವಣೆ ಪ್ರಕ್ರಿಯೆ ನಡೆದಿದೆ.
ಇದನ್ನೂ ಓದಿ : ನಾಳೆ 9ನೇ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್.. ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜು!



















