ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ. ಒಟ್ಟು 369 ವಾರ್ಡ್‌ಗಳ ಪೈಕಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಲಾಗಿದ್ದು, 185 ವಾರ್ಡ್‌ಗಳನ್ನು ಮಹಿಳೆಯರಿಗೆ ಮೀಸಲು ಮಾಡಲಾಗಿದೆ.
ಈ ಹಿಂದೆ ಪ್ರಕಟಿಸಲಾಗಿದ್ದ ಕರಡು ಮೀಸಲಾತಿ ಪಟ್ಟಿಗೆ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರಿಂದ ನೂರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಅವುಗಳನ್ನು ಪರಿಶೀಲಿಸಿದ ಅಧಿಕಾರಿಗಳು ಕೆಲವು ಲೋಪದೋಷಗಳನ್ನು ಸರಿಪಡಿಸಿ ಅಂತಿಮ ಮೀಸಲಾತಿ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ.
ಕರಡು ಪಟ್ಟಿಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡುವಲ್ಲಿ ಕೆಲವು ಅಸಮತೋಲನ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಆಕ್ಷೇಪಣೆಗಳು ವ್ಯಕ್ತವಾಗಿದ್ದವು. ಅಂತಿಮ ಪಟ್ಟಿಯಲ್ಲಿ ಆ ಸಮಸ್ಯೆಗಳನ್ನು ನಿವಾರಿಸಿ ಮಹಿಳೆಯರಿಗೆ ಸಮರ್ಪಕ ಮೀಸಲಾತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದಲ್ಲದೆ, ಕೆಲ ಪ್ರದೇಶಗಳಲ್ಲಿ ಮೊದಲು ನಿಗದಿಪಡಿಸಿದ್ದ ಮೀಸಲಾತಿಯಲ್ಲಿ ಬದಲಾವಣೆ ಮಾಡಲಾಗಿದೆ. ಕೆಲವು ವಾರ್ಡ್‌ಗಳಲ್ಲಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎಂದು ಕೆಲ ಯುವ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ಕೆಲವು ವಾರ್ಡ್‌ಗಳ ಮೀಸಲಾತಿಯನ್ನು ಬದಲಾಯಿಸಲಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಒಟ್ಟು ಮೀಸಲಾತಿ ವಿವರ:
- ಒಟ್ಟು ವಾರ್ಡ್‌ಗಳು – 369
- ಮಹಿಳೆಯರಿಗೆ – 185 ವಾರ್ಡ್
- SC – 43 ವಾರ್ಡ್
- ST – 7 ವಾರ್ಡ್
- BCA – 97 ವಾರ್ಡ್
- BCB – 24 ವಾರ್ಡ್
- ಸಾಮಾನ್ಯ – 192 ವಾರ್ಡ್
ನಗರ ಪಾಲಿಕೆವಾರು ಮೀಸಲಾತಿ ವಿವರ
ಬೆಂಗಳೂರು ನಗರ ಪಾಲಿಕೆ
- ಒಟ್ಟು ವಾರ್ಡ್‌ಗಳು – 72
- SC – 7
- ST – 1
- BCA – 19
- BCB – 5
- ಸಾಮಾನ್ಯ – 40
ಬೆಂಗಳೂರು ಉತ್ತರ ನಗರ ಪಾಲಿಕೆ
- ಒಟ್ಟು ವಾರ್ಡ್‌ಗಳು – 72
- SC – 9
- ST – 2
- BCA – 19
- BCB – 5
- ಸಾಮಾನ್ಯ – 37
ಬೆಂಗಳೂರು ಪಶ್ಚಿಮ ನಗರ ಪಾಲಿಕೆ
- ಒಟ್ಟು ವಾರ್ಡ್‌ಗಳು – 112
- SC – 9
- ST – 2
- BCA – 30
- BCB – 7
- ಸಾಮಾನ್ಯ – 64
ಬೆಂಗಳೂರು ಪೂರ್ವ ನಗರ ಪಾಲಿಕೆ
- ಒಟ್ಟು ವಾರ್ಡ್‌ಗಳು – 50
- SC – 7
- ST – 1
- BCA – 14
- BCB – 3
- ಸಾಮಾನ್ಯ – 25
ಬೆಂಗಳೂರು ಕೇಂದ್ರ ನಗರ ಪಾಲಿಕೆ
- ಒಟ್ಟು ವಾರ್ಡ್‌ಗಳು – 63
- SC – 11
- ST – 1
- BCA – 15
- BCB – 4
- ಸಾಮಾನ್ಯ – 32
ಈ ಅಂತಿಮ ಮೀಸಲಾತಿ ಪಟ್ಟಿ ಪ್ರಕಟವಾದ ಹಿನ್ನೆಲೆಯಲ್ಲಿ ನಗರ ಪಾಲಿಕೆ ಚುನಾವಣೆಗಳಿಗೆ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.
ಇದನ್ನೂ ಓದಿ : ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ | ಜಲಮಂಡಳಿ ಅಧ್ಯಕ್ಷ ಸೂಚನೆ



















