ರಾಮನಗರ: ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು, ನಿಟ್ಟುಸಿರು ಬಿಡುವಂತಾಗಿದೆ.
ಜಿಲ್ಲೆಯ ಚನ್ನಪಟ್ಟಣದ ಇಗ್ಗಲೂರು ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ. ನಾಲ್ಕು ವರ್ಷದ ಗಂಡು ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಚಿರತೆಯು ಈ ಭಾಗದಲ್ಲಿ ಕಳೆದ ಹಲವು ದಿನಗಳಿಂದಲೂ ಜನರಿಗೆ ತೊಂದರೆ ಕೊಡುತ್ತಿತ್ತು. ಹೀಗಾಗಿ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು.
ಇಗ್ಗಲೂರಿನ PWD ಕ್ವಾಟ್ರಸ್ ನಲ್ಲಿ ಇಟ್ಟಿದ್ದ ಬೋನ್ ಗೆ ಕೊನೆಗೂ ಚಿರತೆ ಬಿದ್ದಿದ್ದು, ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.