ಬೆಂಗಳೂರಿನ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಬರ್ಬರ ಹತ್ಯೆ ಹಿಂದೆ ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಪಾತ್ರವಿರುವ ಆರೋಪ ಕೇಳಿ ಬಂದಿದ್ದು, ಎಫ್ ಐಆರ್ ದಾಖಲಾಗಿದೆ.
ಜಮೀನಿನ ವಿಚಾರವಾಗಿ ರೌಡಿಶೀಟರ್ ಶಿವಪ್ರಕಾಶ್ ಹಾಗೂ ಭೈರತಿ ಬಸವರಾಜ್ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಶಿವ ಕೊಲೆಗೆ ಭೈರತಿ ಕುಮ್ಮಕ್ಕು ನೀಡಿದ್ದರು ಎನ್ನುವ ಆರೋಪ ಈಗ ಕೇಳಿ ಬಂದಿದೆ. ಬೆಂಗಳೂರಿನ ಭಾರತೀ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಮಾಜಿ ಸಚಿವ ಭೈರತಿ ಬಸವರಾಜ್ ಎ5 ಆರೋಪಿ ಎಂದು ಉಲ್ಲೇಖಿಸಿಲಾಗಿದೆ. ಕಳೆದ ರಾತ್ರಿ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ನಡೆದಿದೆ. ಕೊಲೆಗೆ ಭೈರತಿ ಬಸವರಾಜ್ ಕುಮ್ಮಕ್ಕು ನೀಡಿದ್ದಾರೆ ಎಂದು ರೌಡಿಶೀಟರ್ ಶಿವಕುಮಾರ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.