ಬಾಗಲಕೋಟೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಗಣೇಶ ವಿಸರ್ಜನೆ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲಯೆಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಿಲ್ಲೆಯ ಮುಧೋಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯತ್ನಾಳ್ ವಿರುದ್ಧ ಮುಧೋಳ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಜನತಾರಾಜ್ ಗಣೇಶ ವಿಸರ್ಜನೆ ವೇಳೆ ಯತ್ನಾಳ್ ಭಾಷಣ ಮಾಡಿದ್ದು, ಟಿಪ್ಪು ಸುಲ್ತಾನ್, ಔರಂಗಜೇಬ್ ಕುರಿತು ಅಶ್ಲೀಲ ಪದ ಬಳಕೆ ಮಾಡಿದ್ದರು. ಈ ಕುರಿತು ಎಸ್ಪಿ ಅಮರನಾಥ ರೆಡ್ಡಿ ಮಾಹಿತಿ ಹಂಚಿಕೊಂಡಿದ್ದಾರೆ.