ಬೆಂಗಳೂರು: ಬಿಗ್ ಬಾಸ್ ನ ಮಾಜಿ ಸ್ಪರ್ಧಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ವಿರುದ್ಧ ರೀಲ್ಸ್ ವಿಷಯಕ್ಕೆ ಸಂಬಂಧಿಸಿದಂತೆ ನಗರದ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಾರೆ. ಹೀಗಾಗಿಯೇ ಪೊಲೀಸರು ಸಾರ್ವಜನಿಕವಾಗಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸಿದ್ದಾರೆಂದು ಎಫ್ ಐಆರ್ ದಾಖಲಿಸಿದ್ದಾರೆ.

ಈ ರೀಲ್ಸ್‌ನಲ್ಲಿ ವಿನಯ್ ಗೌಡ ಲಾಂಗು ಹಿಡಿದು, ದರ್ಶನ್ ಅವರ ‘ಕರಿಯ’ ಸಿನಿಮಾದ ಸ್ಟೈಲ್‌ನಲ್ಲಿ ಸ್ಲೋ ಮೋಷನ್‌ನಲ್ಲಿ ನಡೆದಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ʻಬುಜ್ಜಿʼ ಎಂಬ ಇನ್‌ಸ್ಟಾ ಖಾತೆಯಲ್ಲಿ ಇದನ್ನು ಶೇರ್ ಮಾಡಲಾಗಿದೆ. ಹೀಗಾಗಿ ಇಬ್ಬರ ವಿರುದ್ಧ ಆರ್ಮ್ಸ್ ಆಕ್ಟ್ ಆಡಿ ಕೇಸ್ ದಾಖಲಿಸಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ರಿಲ್ಸ್ ಮಾಡುವುದು, ಭಯದ ವಾತಾವರಣ ಸೃಷ್ಟಿಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಹೀಗಾಗಿ ಇಬ್ಬರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.