ಬಾಗಲಕೋಟೆ : ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ವೈಯಕ್ತಿಕ ಟೀಕೆ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಬಾಗಲಕೋಟೆ ಬೈ ಎಲೆಕ್ಷನ್ ಅಖಾಡದಲ್ಲಿ ಬಿಜೆಪಿ ಅಭ್ಯರ್ಥಿಯ ಪರ ಪ್ರಚಾರ ಮಾಡುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಐಹೊಳೆ ಗ್ರಾಮದಲ್ಲಿ ಪ್ರಚಾರದ ವೇಳೆ ಭಾಷಣ ಮಾಡಿದ್ದ ಪ್ರತಾಪ್ ಸಿಂಹ, ಮುಸಲ್ಮಾನರ ಓಲೈಕೆಗೆ ಸಿದ್ದರಾಮಯ್ಯ ಬೇಕಾದ್ರೆ ತುದಿ ಕಟ್ ಮಾಡಿಕೊಳ್ಳಲಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಅವರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ!



















