ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ತಳಕು ಹಾಕಿಕೊಂಡಿದ್ದು, ವಿರೋಧ ಪಕ್ಷಗಳು ಇದೇ ವಿಷಯವನ್ನು ಮುಂದಿಟ್ಟುಕೊಂಡು ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿವೆ. ಈಗ ಸಚಿವರ ವಿರುದ್ಧ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮಂಗಳವಾರ ರೆಸ್ ಕೋರ್ಸ್ ರಸ್ತೆಯ ಮಾಧವರ ಜಂಕ್ಷನ್ ಹತ್ತಿರ ಬಿಜೆಪಿ ಕಾರ್ಯಕರ್ತರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆದರೆ, ಇಂದು ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರ ವಿರುದ್ಧ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬಿಜೆಪಿ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ಸಿ.ಟಿ ರವಿ, ರವಿಕುಮಾರ್, ಉಮೇಶ್ ಶೆಟ್ಟಿ, ಶಿವಕುಮಾರ್, ಕಿರಣ್ ಕುಮಾರ್ ಕಸಾಲೆ , ಹರ್ಷ ಹೆಗ್ಡೆ, ವೆಂಕಟ್, ಕರುಣಾಕರ್, ನಾಗೇಶ್, ಪ್ರಶಾಂತ್, ಯಧುವೀರ್, ರಾಜೇಂದ್ರನ್ ಮೂರ್ತಿ ಸೇರಿದಂತೆ 13 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬಿಎನ್ ಎಸ್ 285, 292 , 3(5) ಮತ್ತು KOPD 3 ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.