ಮಂಗಳೂರು: ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮುಸ್ಲಿಂ ಧರ್ಮಗುರು (Muslim Religion) ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ (Belthangady) ವಿಧಾನಸಭಾ ಬಿಜೆಪಿ ಶಾಸಕ ಹರೀಶ್ ಪೂಂಜಾ ಎಫ್ ಐಆರ್ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.