ಕಾಂಗ್ರೆಸ್ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ಚಲವಾದಿ ನಾರಾಯಣಸ್ವಾಮಿ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಪಕ್ಷವನ್ನು ತುಂಡು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವುದಾಗಿ ಚಲವಾದಿ ನಾರಾಯಣಸ್ವಾಮಿ ಅವರು ಹೇಳಿಕೆ ನೀಡಿದ್ದರು. ಈ ಪ್ರಚೋದನಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ ಅವರು ನೀಡಿದ ದೂರಿನ ಅನ್ವಯ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಲವಾದಿ ನಾರಾಯಣಸ್ವಾಮಿ ವಿರುದ್ಧ ನಿನ್ನೆಯಷ್ಟೇ ಕಾಂಗ್ರೆಸ್ ನಾಯಕರು ಪ್ರತ್ಯೇಕವಾಗಿ 3 ದೂರುಗಳನ್ನು ಸಲ್ಲಿಸಿದ್ದರು.


















