ಕಲಬುರಗಿ : ‘ಕಾಮಿಡಿ ಕಿಲಾಡಿ’ ಖ್ಯಾತಿಯ ಕಿರುತೆರೆ ನಟಿ ನಯನಾ ವಿರುದ್ಧ FIR ದಾಖಲಾಗಿದೆ. ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಕಾಯ್ದೆ ಅಡಿ (ಅಟ್ರಾಸಿಟಿ) ದೂರು ದಾಖಲಾಗಿದೆ.
ಅಕ್ಟೋಬರ್ 29 ರಂದು ಮನಿಮಿತ್ರಾ ಕಂಪನಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪವನ್ನು ನಯನಾ ಎದುರಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಸಿದ ಆರೋಪವಿದೆ. ಇದೀಗ ದಲಿತ ಸೇನೆ ಕಲಬುರಗಿ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ನೀಡಿದ ದೂರಿನಡಿ FIR ದಾಖಲಾಗಿದೆ.
ನಟಿ ನಯನಾ ಕಾರ್ಯಕ್ರಮದಲ್ಲಿ ಶೋಷಿತ ಸಮುದಾಯಕ್ಕೆ ಉದ್ದೇಶ ಪೂರ್ವಕವಾಗಿ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕಠಿಣಕ್ರಮ ಜರುಗಿಸಬೇಕು ಎಂದು ಮಂಜುನಾಥ್ ಭಂಡಾರಿ ಆಗ್ರಹಿಸಿದ್ದಾರೆ. ನಯನ ತಮ್ಮ ಕೊಳಕು ಬುದ್ದಿಯನ್ನು ಪ್ರದರ್ಶಿಸಿ ಜಾತಿಯತೆಯೇ ಮನಸ್ಥಿತಿಯನ್ನೂ ಬಹಿರಂಗ ಪಡಿಸಿದ್ದಾರೆ. ಇದು ಶೋಷಿತ ಸಮುದಾಯದ ಹೊಲೆಯ ಜಾತಿಗೆ ಉದ್ದೇಶಪೂರ್ವಕವಾಗಿ ಅವಹೇಳನ ಮಾಡಿ ವಿಕೃತಿ ಮೆರೆದಿದ್ದಾರೆ. ಇದರಿಂದ ಶೋಷಿತ ಸಮುದಾಯಕ್ಕೆ ಬಹಳ ನೋವುನ್ನುಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ : ಪ್ರಧಾನಿ ಮೋದಿ ಪಾದಕ್ಕೆರಗಿ ಆಶೀರ್ವಾದ ಪಡೆದ ನಟಿ ಐಶ್ವರ್ಯಾ ರೈ!



















