ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಗೋಕಾಕ್‌ನ ಲಕ್ಷ್ಮಿದೇವಿ ಜಾತ್ರೆಯಲ್ಲಿ ಸಾರ್ವಜನಿಕವಾಗಿ ಗುಂಡು ಹಾರಿಸಿದ್ದಕ್ಕೆ ಸಂತೋಷ್ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಾವಿರಾರು ಜನರ ಮಧ್ಯೆ ನಿಂತು ಸಂತೋಷ್ ಜಾರಕಿಗೊಳಿ ಜಾತ್ರಾ ಮಹೋತ್ಸವದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದ. ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ವಿಡಿಯೋ ವೈರಲ್ ಆದರೂ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈಗ ವಿಡಿಯೋ ಆಧರಿಸಿ ಗೋಕಾಕ್ ಶಹರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.