ಮಂಗಳೂರು: ಸುಹಾಸ್ ಶೆಟ್ಡಿ ಶ್ರದ್ದಾಂಜಲಿ ಕಾರ್ಯಕ್ರಮದ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲ್ಲೂಕಿನ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಮೇ 12 ರಂದು ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ಅಬ್ಬರದಲ್ಲಿ ಪ್ರಭಾಕರ್ ಭಟ್ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.