ಬೆಳಗಾವಿ: ಇಲ್ಲಿಯ ಸಿಪಿಎಡ್ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬೆಲೆಯೇರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಪ್ಪು ಬಾವುಟ ಪ್ರದರ್ಶಿಸಿದ ಮಹಿಳೆಯರ ವಿರುದ್ಧ ದೂರು ದಾಖಲಾಗಿದೆ.
ಈ ಪ್ರತಿಭಟನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿತ್ತು. ಈ ವೇಳೆ ಸುಮಾರು 6 ಜನ ಮಹಿಳೆಯರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಈ ವೇಳೆ ದೊಡ್ಡ ಹೈಡ್ರಾಮಾ ಕೂಡ ನಡೆದಿದೆ. ಇದು ದೊಡ್ಡ ಅವಾಂತರಕ್ಕೂ ಕಾರಣವಾಗಿದ್ದು, ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈಗ 6 ಜನ ಮಹಿಳೆಯರನ್ನು ಬಂಧಿಸಿರುವ ಕುರಿತು ಉತ್ತರ ವಲಯದ ಐಜಿಪಿ ಚೇತನ್ ಸಿಂಗ್ ರಾಠೋಡ್ (Chetan Singh Rathore, IGP Northern Range) ಮಾಹಿತಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿದ್ದಾಗ ಕಪ್ಪುಬಾವುಟ ಪ್ರದರ್ಶಿಸಿದ ಮಹಿಳೆಯರನ್ನು ಬಂಧಿಸಲಾಗಿದೆ ಮತ್ತು ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ ಎಂದು ಹೇಳಿದ್ದಾರೆ.