ಬೆಂಗಳೂರು : ಲಕ್ಷಾಂತರ ಫಾಲೋವರ್ಸ್ ಹೊಂದಿರುವ ‘ಅಮುಕು ಡುಮುಕು’ ಖ್ಯಾತಿಯ ಯೂಟ್ಯೂಬರ್ ಮಂಜು ಸೇರಿ ಹಲವರ ವಿರುದ್ಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರೆಸ್ಟೋ ಬಾರ್‌ನಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿ, ಪಬ್ ಮ್ಯಾನೇಜರ್ ಮೇಲೂ ಹಲ್ಲೆಗೆ ಯತ್ನಿಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮದ್ಯ ಸೇವಿಸಿದ್ದ ಮಂಜು ರೆಸ್ಟೋ ಬಾರ್‌ನಲ್ಲಿ ಗಲಾಟೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ನಡೆಸಿದ ಬಳಿಕ ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪಬ್ ಮ್ಯಾನೇಜರ್ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ‘ಅಮುಕು ಡುಮುಕು’ ಹೆಸರಿನಿಂದ ಜನಪ್ರಿಯವಾಗಿರುವ ಮಂಜು, ಈ ಹಿಂದೆಯೂ ಹಲವು ವಿವಾದಗಳಿಂದ ಸುದ್ದಿಯಾಗಿದ್ದ. ಪೆಟ್ರೋಲ್ ಕುಡಿದಿದ್ದೇನೆ ಎಂದು ಹೇಳಿ ವೈರಲ್ ಆಗಿದ್ದ ವಿಡಿಯೋ ಹಾಗೂ ಸಿನಿಮಾ ಪ್ರಚಾರ ಕಾರ್ಯಕ್ರಮಗಳಲ್ಲೂ ಹೈಡ್ರಾಮಾ ನಡೆಸಿ ಗಮನ ಸೆಳೆದಿದ್ದ. ‘ಬಿಗ್ ಬಾಸ್‌ಗೆ ಹೋಗಬೇಕು’ ಎಂದು ಹೇಳಿಕೊಂಡು ಕೂಡ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ.
ಸದ್ಯ ‘ಅಮುಕು ಡುಮುಕು’ ಮಂಜು ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ. ಆರೋಪಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.
ಇದನ್ನೂ ಓದಿ : ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ



















