ಚಿಕ್ಕಮಗಳೂರು: ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಿಸಿರುವ ಘಟನೆ ನಡೆದಿದೆ.
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ 25 ಹಿಂದೂ ಕಾರ್ಯಕರ್ತರ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ (Sringeri Police Station) ಎಫ್ ಐಆರ್ ದಾಖಲಿಸಲಾಗಿದೆ.
ಶೃಂಗೇರಿ ಪಟ್ಟಣದ ಕಾಂಚಿನಗರದಲ್ಲಿ ಗಣೇಶ ಪ್ರತಿಷ್ಠಾಪಿಸಲಾಗಿತ್ತು. ಹೀಗಾಗಿ ಗುರುವಾರ ವಿಸರ್ಜನೆಗೆ ತಯಾರಿ ನಡೆಸಲಾಗಿತ್ತು. ಯುವಕರು ಮೆರವಣಿಗೆ ಮೂಲಕ ಗಣೇಶ ವಿಸರ್ಜನೆಗೆ ಮುಂದಾಗಿದ್ದರು. ಮೆರವಣಿಗೆ ಶೃಂಗೇರಿ ಪಟ್ಟಣದ ವೆಲ್ಕಮ್ ಗೇಟ್ ಸರ್ಕಲ್ ಗೆ ಬಂದ ಸಂದರ್ಭದಲ್ಲಿ ಸರ್ಕಲ್ ನಲ್ಲಿದ್ದ ಮಸೀದಿ ಎದುರುಗಡೆ ಹಿಂದೂ ಕಾರ್ಯಕರ್ತರು ಪಟಾಕಿ ಸಿಡಿಸಿ ಡ್ಯಾನ್ಸ್ ಮಾಡಿದ್ದಾರೆ.
ಹೀಗಾಗಿ ಶಾಂತಿ ಭಂಗ, ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆಂಬ ಕಾರಣಕ್ಕೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಶಾಂತಿ ಭಂಗ, ಭಯದ ವಾತಾವರಣ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದ ಕೋಮುಗಲಭೆಯ ನಂತರ ಈ ಘಟನೆ ನಡೆದಿದ್ದು, ಸರ್ಕಾರದ ವಿರುದ್ಧ ಎಲ್ಲರೂ ಹಿಡಿಶಾಪ ಹಾಕುತ್ತಿದ್ದಾರೆ.