ಬೆಂಗಳೂರು: ನಗರತ್ ಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಅನಧಿಕೃತವಾಗಿ ಕಟ್ಟಡ ಕಟ್ಟಿರುವ ಕುರಿತು ಈ ವೇಳೆ ಮಾಹಿತಿ ಪಡೆದುಕೊಂಡಿದ್ದಾರೆ.
ಇದೇ ವೇಳೆ ಬಿಜೆಪಿಯವರು ಧರ್ಮಸ್ಥಳ ಅಭಿಯಾನ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಧರ್ಮಸ್ಥಳ ವಿಚಾರವಾಗಿ ರಾಜಕೀಯ ಮಾಡುತ್ತಿದ್ದಾರೆ. ಎಸ್ ಐಟಿ ರಚನೆ ಮಾಡಿದ ಸಂದರ್ಭದಲ್ಲಿ ಯಾವ ಕಾರಣಕ್ಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.



















