ಚಿಕ್ಕಮಗಳೂರು | ಜಿಲ್ಲೆಯ ಎನ್.ಆರ್ ಪುರ ತಾಲೂಕಿನಲ್ಲಿ ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಕೈಮರ-ಮತ್ತಿಮರ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.
ವಿದ್ಯುತ್ ತಂತಿ ತಗುಲುತ್ತಿದ್ದಂತೆಯೇ ಟ್ರ್ಯಾಕ್ಟರ್ ಹಾಗೂ ಅದರಲ್ಲಿದ್ದ ಹುಲ್ಲಿಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಎಲ್ಲೆಡೆ ವ್ಯಾಪಿಸಿದೆ. ಪರಿಣಾಮವಾಗಿ ಟ್ರ್ಯಾಕ್ಟರ್ ಮತ್ತು ಹುಲ್ಲು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಎಚ್ಚರಿಕೆಯಿಂದ ಟ್ರ್ಯಾಕ್ಟರ್ ನಿಲ್ಲಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದೊಡ್ಡ ದುರಂತ ತಪ್ಪಿದಂತಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಈ ಘಟನೆ ಎನ್.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಹಾವೇರಿಯಲ್ಲಿ ಭಾರೀ ಗಾಳಿ ಮಳೆ – ಧರೆಗುರುಳಿದ ಮರ, ವಿದ್ಯುತ್ ಕಂಬಗಳು



















