ರಾಜಸ್ಥಾನದ ಅಜ್ಮೀರ್ ನಲ್ಲಿಅಗ್ನಿ ಅವಘಡ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ನಾಲ್ವರು ಬಲಿಯಾಗಿದ್ದು, 7ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಅಜ್ಮೀರ್ ನ ಲಾಡ್ಜ್ ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ದೆಹಲಿ ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ.
ಸದ್ಯ ಗಾಯಾಳುಗಳನ್ನು ಸದ್ಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಧಗಧಗಿಸುತ್ತಿರುವ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದೆ. ಇನ್ನು ಈ ಅಗ್ನಿ ಅವಾಂತರಕ್ಕೆ ಹೋಟೆಲ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದೇ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.