ರಾಂಜಿ: ಪಟಾಕಿ ಅಂಗಡಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಐವರು ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.
ಈ ಹೃದಯ ವಿದ್ರಾವಕ ಘಟನೆ ಜಾರ್ಖಂಡ್ ನ (Jharkhand) ಗರ್ವಾದಲ್ಲಿ (Garhwa) ನಡೆದಿದೆ. ಪಟಾಕಿ ಅಂಗಡಿಯಲ್ಲಿ ಈ ದುರಂತ ಸಂಭವಿಸಿದೆ. ಈ ಕುರಿತು ಮಾಹಿತಿ ನೀಡಿರುವ ಗರ್ವಾ ಜಿಲ್ಲೆ ಎಸ್ಪಿ ದೀಪಕ್ ಪಾಂಡೆ, ಗರ್ವಾ ಜಿಲ್ಲೆಯ ರಂಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆ ಕುರಿತು ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
ಕೂಡಲೇ ಗಾಯಾಳುಗಳನ್ನು ಛತ್ತೀಸ್‌ಗಢದ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಈ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಘಟನೆಗೆ ಜಾರ್ಖಂಡ್ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂತಾಪ ಸೂಚಿಸಿದ್ದಾರೆ. ಗರ್ವಾ ಜಿಲ್ಲೆಯ ರಾಂಕಾ ಬ್ಲಾಕ್‌ನಲ್ಲಿರುವ ಪಟಾಕಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಐದು ಜನರು ಸಾವನ್ನಪ್ಪಿದ ದುಃಖಕರ ಸುದ್ದಿ ತಲುಪಿದೆ. `ಮರಾಂಗ್ ಬುರು’ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.