ಹೈದರಾಬಾದ್ : ಶನಿವಾರ ಹೈದರಾಬಾದ್‌ನ ನಾಂಪಲ್ಲಿಯ ಮುಖ್ಯ ರಸ್ತೆಯಲ್ಲಿರುವ ಬಚ್ಚಾಸ್ ಫರ್ನಿಚರ್ಸ್ ಅಂಗಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಸಾವನ್ನಪ್ಪಿದ್ದು, ಮೃತದೇಹವನ್ನು ಹೊರತೆಗೆಯಲಾಗಿದೆ.
ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಇದ್ದಕ್ಕಿದಂತೆ ಬೆಂಕಿ ನಾಲ್ಕು ಅಂತಸ್ತಿನ ಕಟ್ಟಡಕ್ಕೆ ವ್ಯಾಪಿಸಿತ್ತು. ಘಟನೆಯಲ್ಲಿ ಒಟ್ಟು ಐದು ಜನರು ಸಾವನ್ನಪ್ಪಿದ್ದಾರೆ. ಸುಮಾರು 22 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ರಕ್ಷಣಾ ತಂಡಗಳು ಕಟ್ಟಡದಿಂದ ಐವರ ಶವಗಳನ್ನು ಹೊರತೆಗೆದಿವೆ.
ಸದ್ಯ ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ನಿಂತಿದ್ದು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ : ಅಥಣಿ ಪೊಲೀಸರ ವಿಶೇಷ ಕಾರ್ಯಾಚರಣೆ | ಮೂವರು ಹಗಲು ದರೋಡೆಕೋರರ ಬಂಧನ



















