ಬೆಳಗಾವಿ : ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಡಾಂಗೆ ಪ್ಲಾಸ್ಟಿಕ್ ಕಂಪನಿಯಲ್ಲಿ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ಪರಿಣಾಮ ಕಂಪನಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ ಸಿಬ್ಬಂದಿ ಹೆಚ್ಚಿನ ಅನಾಹುತ ಸಂಭವಿಸದಂತೆ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಈ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಮೈಸೂರು | ಹಸುವಿನ ಮೇಲೆ ಚಿರತೆ ದಾಳಿ



















