ಮೈಸೂರು: ಶ್ರೀಕಂಠೇಶ್ವರ ಸ್ವಾಮಿಯ ಕಲ್ಲು ಮಂಟಪಕ್ಕೆ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಭಾರೀ ದುರಂತವೊಂದು ತಪ್ಪಿದೆ. ಪುರಾತತ್ವ ಇಲಾಖೆಗೆ ಒಳಪಟ್ಟಿರುವ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಹಿಂಭಾಗದ ಪಾರ್ಕಿಂಗ್ ಸ್ಥಳದಲ್ಲಿರುವ ಕಲ್ಲು ಮಂಟಪದ ಬಳಿ ನಿನ್ನೆ ಸಂಜೆ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಈ ಕಲ್ಲು ಮಂಟಪ ಪುರಾತತ್ವ ಇಲಾಖೆಗೆ ಒಳಪಟ್ಟಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿ ಗಿಡ ಗಂಟೆಗಳು ಬೆಳೆದು ನಿಂತಿವೆ.
ಬೇಸಿಗೆ ಪರಿಣಾಮ ಒಣಗಿದ್ದ ಗಿಡಗಂಟೆಗಳು ಬೆಂಕಿ ಆವರಿಸಿದ್ದರಿಂದ ಅಕ್ಕಪಕ್ಕ ಮನೆಯ ನಿವಾಸಿಗಳು ಆತಂಕಗೊಂಡಿದ್ದರು. ಪರಾತತ್ವ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಧಗಧಗನೇ ಹೊತ್ತಿ ಉರಿದ ಶೋಲಾರಣ್ಯ : 25ಕ್ಕೂ ಹೆಚ್ಚು ಕಡೆ ಕಾಣಿಸಿಕೊಂಡ ಕಾಡ್ಗಿಚ್ಚು



















