ಬೆಂಗಳೂರು : ಗ್ಯಾಸ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ ಐವರು ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರಿನ ಪೀಣ್ಯ ಸಮೀಪದ ಚೊಕ್ಕಸಂದ್ರದಲ್ಲಿ ನಡೆದಿದೆ.
ಅಂಶುರಾಜ್ ಕುಮಾರ್(18) ಹುಸೇನ್ ಖಾನ್(21) ಮುಜಾಫರ್ ಹುಸೇನ್(19) ಆರಬೇಗ್ ಆಲಂ(26) ರೋಹಿತ್ ಚೌದರಿ(20) ಗಾಯಳುಗಳು. ಗಾಯಗೊಂಡ ಕಾರ್ಮಿಕರು ಬಿಹಾರ ಮೂಲದವರಾಗಿದ್ದು, ಒಂದೇ ರೂಂನಲ್ಲಿ ಐವರು ವಾಸವಿದಿದ್ದರು ಎಂದು ತಿಳಿದುಬಂದಿದೆ. ಗ್ಯಾಸ್ ಲೀಕ್ ಆಗಿರೋದನ್ನ ಗಮನಿಸದೇ ಟೀ ಕಾಯಿಸುವ ವೇಳೆ ಈ ಅವಘಡ ಸಂಭವಿಸಿದೆ.
ಸದ್ಯ ಗಾಯಾಳುಗಳಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಚಿಕ್ಕಮಗಳೂರು | ಮೆಕ್ಕೆಜೋಳ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ



















