ಬೆಂಗಳೂರು: ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಧಗಧಗನೆ ಹೊತ್ತಿ ಉರಿದಿರುವ ಘಟನೆಯೊಂದು ನಡೆದಿದೆ.
ಘಟನೆಯಲ್ಲಿ ಕಟ್ಟಡ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಸೀಗೆಹಳ್ಳಿಯ ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಸತೀಶ್ ಎಂಬುವವರಿಗೆ ಸೇರಿದ ಬಿಲ್ಡಿಂಗ್ ನಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶ ಮೂಲದ ಉದಯ್ (40) ಹಾಗೂ ಬಿಹಾರ ಮೂಲದ ರೋಶನ್ (23 ) ಬಲಿಯಾಗಿದ್ದಾರೆ.
ನಿರ್ಮಾಣ ಹಂತದ ಬಿಲ್ಡಿಂಗ್ ನಲ್ಲಿ ವುಡ್ ವರ್ಕ್ ಮಾಡಲಾಗಿತ್ತು. ಈ ವೇಳೆ ಕಟ್ಟಡದಲ್ಲಿ ಕಾರ್ಮಿಕರು ಅಲ್ಲಿ ಕೆಲಸಗಾರರು ಕೆಲಸ ಮಾಡುತ್ತಿದ್ದರು. ಆದರೆ, ಕೆಲಸಗಾರರ ಸಿಲಿಂಡರ್ ಸೋರಿಕೆಯಿಂದಾಗಿ ಇಡೀ ಕಟ್ಟಡಕ್ಕೆ ಬೆಂಕಿ ಬಿದ್ದಿದೆ. ಪರಿಣಾಮ ಕಟ್ಟಡ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್ಮಿಕನೊಬ್ಬ ನೀರಿನ ಟ್ಯಾಂಕರ್ ಮೇಲೆ ಕುಳಿತಿದ್ದರಿಂದಾಗಿ ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಆತನನ್ನು ರಕ್ಷಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.