ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಈ ದುರಂತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಕಿಡಿಗೇಡಿಗಳ ಕೃತ್ಯವೋ ಎಂಬುದು ಇನ್ನೂ ತಿಳಿದುಬಂದಿಲ್ಲ. ಒಂದು ಅಂಗಡಿಯಿಂದ ಮತ್ತೊಂದು ಅಂಗಡಿಗೆ ಬೆಂಕಿ ವ್ಯಾಪಿಸಿ ಹೊತ್ತಿ ಉರಿದಿದ್ದು, ಅಗ್ನಿ ಅವಘಡದಲ್ಲಿ 3ಕ್ಕೂ ಹೆಚ್ಚು ಸಿಲಿಂಡರ್ ಸ್ಪೋಟಗೊಂಡಿದೆ ಎನ್ನಲಾಗಿದೆ.
ಪ್ರತಿದಿನ ಸಂಜೆಯ ಬಳಿಕ ಚೆಕ್ ಪೋಸ್ಟ್ ಬಂದಾಗುವ ಹಿನ್ನೆಲೆ ಅಂಗಡಿ, ಹೊಟೇಲ್ನಲ್ಲಿ ಯಾರೂ ಇರಲಿಲ್ಲ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೂದಿಯಾಗಿವೆ.
ಸತತ ಒಂದೂವರೆ ತಾಸು ಕಾರ್ಯಾಚರಣೆ ನಡೆಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಗ್ನಿ ಅವಘಡ ನಡೆದಿದೆ.
ಇದನ್ನೂ ಓದಿ : ಶಿವಮೊಗ್ಗ | ಹಾಸ್ಟೆಲ್‌ನಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!



















