ರಾಮನಗರ: ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.
ಕೂಡಲೇ ರೈಲು ನಿಲ್ಲಿಸಿ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹೀಗಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ. ಉದಯ್ ಪುರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ರೈಲು ಮೈಸೂರಿನಿಂದ ಬೆಂಗಳೂರಿಗೆ ಹೊರಟಿತ್ತು ಎನ್ನಲಾಗಿದೆ. ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದ ಬಳಿ ಈ ಘನಟೆ ನಡೆದಿದೆ.