ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ.
ವಾಶಿಂಗ್ ಮಷೀನ್, ಫ್ರಿಡ್ಜ್ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಆರ್.ಟಿ ನಗರ ಠಾಣೆ ವ್ಯಾಪ್ತಿಯಲ್ಲಿನ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿಯನ್ನು ಸಂಪೂರ್ಣವಾಗಿ ಅಗ್ನಿಶಾಮಕ ಸಿಬ್ಬಂದಿ ನಂದಿಸಿದ್ದಾರೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.