ಬೆಂಗಳೂರು: ಶಾರ್ಟ್ ಸರ್ಕ್ಯಾಟ್‌ನಿಂದ ಕಾರಿನ ಗ್ಯಾರೇಜ್‌ನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಿಎಂಡಬ್ಲ್ಯೂ (BMW) ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲಾಗಿರುವ ಘಟನೆ ನಗರದ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ಭಾನುವಾರ ರಾತ್ರಿ 9 ಘಂಟೆಯ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಕೂಡಲೇ 2 ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ಬಂದು ಅಗ್ನಿ ನಂದಿಸುವ ಕಾರ್ಯ ನಡೆಸಿವೆ.
ಇದನ್ನೂ ಓದಿ; ನಕಲಿ ದಾಖಲೆ ಸೃಷ್ಟಿಸಿ ಸಿಎಲ್-7 ಲೈಸೆನ್ಸ್ ಮಂಜೂರು : ವಕೀಲ ಹರಿಪ್ರಸಾದ್ ದೂರಿನಿಂದ ‘ಮಹಾ ಭ್ರಷ್ಟಾಚಾರ’ ಬಯಲು



















