ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ಅಗ್ನಿ ಅವಘಡ ಸಂಭವಿಸಿದೆ. ಬಸ್‌ನಲ್ಲಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಪ್ರಯಾಣಿಕರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು. ಈ ವೇಳೆ ತಕ್ಷಣ ಎಚ್ಚೆತ್ತುಕೊಂಡ ಬಸ್ ಚಾಲಕ ಮತ್ತು ನಿರ್ವಾಹಕ, ಸಮಯಪ್ರಜ್ಞೆ ಮೆರೆದು ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಿಷಯ ತಿಳಿಯುತ್ತಿದ್ದಂತೆ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಕೂಡ ಘಟನಾ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.

















