ತುಮಕೂರು: ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಕಿಯ ಕಿನ್ನಾಲಿಗೆಗೆ ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ತುಮಕೂರಿನ ಕ್ಯಾತಸಂದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಅನಾಹುತದಿಂದ ಲಾರಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ. ದಾಬಸ್ ಪೇಟೆಯಿಂದ ವಸಂತ ನರಸಾಪುರ ಕಡೆಗೆ ಲಾರಿ ತೆರಳುತ್ತಿತ್ತು. ಈ ವೇಳೆ ಲಾರಿಯ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಲಾರಿಯಿಂದ ಚಾಲಕ ಕೆಳಗೆ ಇಳಿದಿದ್ದಾನೆ. ಬೆಂಕಿ ಕೆನ್ನಾಲಿಗೆಗೆ ಲಾರಿ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಲಾರಿ ಖಾಲಿಯಿದ್ದ ಹಿನ್ನೆಲೆಯಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ ಎನ್ನಲಾಗಿದೆ.