ಬೆಂಗಳೂರು ಗ್ರಾಮಾಂತರ : ದೊಡ್ಡಬಳ್ಳಾಪುರ ಹೊರವಲಯದ ಮುತ್ತೂರು ಗ್ರಾಮದಲ್ಲಿ ನಡೆದಿದ್ದ ಪಟಾಕಿ ದುರಂತ ಬಾಲಕ ಸಾವನ್ನಪ್ಪಿದ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಗಣೇಶ ವಿಸರ್ಜನೆ ವೇಳೆ ಸಿಡಿಮದ್ದುಗಳ ಬಳಕೆ ನಿಷೇಧ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜ್ ಜಿಲ್ಲೆಯ ನಾಲ್ಕು ತಾಲೂಕುಗಳಾದ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಪಟಾಕಿ ನಿಷೇಧ ಮಾಡಿ ಈ ಕ್ಷಣದಿಣದಲೆ ಜಾರಿ ಬರುವಂತೆ ಆದೇಶ ನೀಡಿದ್ದಾರೆ.
ಸಾರ್ವಜನಿಕ ಮತ್ತು ದಾರ್ಮಿಕ ಕಾರ್ಯಕ್ರಮಗಳಲ್ಲೂ ಪಟಾಕಿ ಹೊಡೆಯುವುದು ನಿಷೇಧಿಸಲಾಗಿದ್ದು, ಪಟಾಕಿಗಳು ಬಳಕೆ ಮಾಡಿದಲ್ಲಿ ಅವರ ವಿರುದ್ದ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ.