ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಮೊದಲ ಹಂತದ ಮತದಾನ ನಾಳೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬುಧವಾರ 24 ವಿಧಾನಸಭಾ ಕ್ಷೇತ್ರಗಳಲ್ಲಿ 23 ಲಕ್ಷ ಮತದಾರರು 90 ಪಕ್ಷೇತರರು ಸೇರಿದಂತೆ 219 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಮೊದಲ ಹಂತದ ಮತದಾನವು ಪೀರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಏಳು ಜಿಲ್ಲೆಗಳಿಗೆ ನಡೆಯಲಿದೆ. 24 ಸ್ಥಾನಗಳಲ್ಲಿ ಎಂಟು ಕ್ಷೇತ್ರಗಳು ಜಮ್ಮು ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮತ್ತು 16 ಕ್ಷೇತ್ರಗಳು ಕಾಶ್ಮೀರ ಕಣಿವೆಯ ನಾಲ್ಕು ಜಿಲ್ಲೆಗಳಲ್ಲಿವೆ.
11,76,462 ಪುರುಷರು, 11,51,058 ಮಹಿಳೆಯರು ಮತ್ತು 60 ತೃತೀಯ ಲಿಂಗಿಗಳು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 14,000 ಮತಗಟ್ಟೆ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ.