ಕೊಪ್ಪಳ : ಗೂಡ್ಸ್ ವಾಹನ ಡಿವೈಡರ್ ಹಾರಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಅಪಘಾತದಲ್ಲಿ 4 ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕೆಂಚಮ್ಮ ಬಾಳೆಕಾಯಿ(35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಮತ್ತು ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಮೃತಪಟ್ಟವರು ಎಂದು ತಿಳಿದುಬಂದಿದೆ.
ಇವರೆಲ್ಲ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು ಎಂದು ತಿಳಿದುಬಂದಿದೆ. ಓಮ್ನಿಯಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.
ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ಇದನ್ನೂ ಓದಿ : ನಮ್ಮ ಮೆಟ್ರೋ ಕಾಮಗಾರಿ ವೇಳೆ ಕರೆಂಟ್ ಶಾಕ್ – ಕಾರ್ಮಿಕ ದುರ್ಮರಣ!


















