ಬೀದರ್: ಭೀಕರ ಅಪಘಾತದಲ್ಲಿ ಪ್ರಯಾಗ್ ರಾಜ್ ಗೆ ಹೋಗಿದ್ದ ರಾಜ್ಯದ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಉತ್ತರ ಪ್ರದೇಶದ ಮಿರಾಜ್ ಪುರ್ ಬಳಿ ಈ ದುರ್ಘಟನೆ ಸಂಭವಿಸಿದೆ. ಕ್ರೂಸರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೀದರ್ ಜಿಲ್ಲೆಯ ಐವರು ಸಾವನ್ನಪ್ಪಿದ್ದಾರೆ. ಬೀದರ್ ನಿಂದ ಕ್ರೂಸರ್ ನಲ್ಲಿ ಕುಂಭಮೇಳೆಕ್ಕೆ 12 ಜನ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಬೀದರ್ ಮೂಲದವರು ಪ್ರಯಾಗ್ ರಾಜ್ ಕ್ಕೆ ಭೇಟಿ ನೀಡಿ ಕಾಶಿ ಕಡೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರನ್ನು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಅಲ್ಲದೇ, ಈ ಘಟನೆಯಲ್ಲಿ 7 ಜನ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.