ನವದೆಹಲಿ: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತವು 1971ರ ನಂತರ ಮೊದಲ ಬಾರಿಗೆ ಮೂರು ಪಡೆಗಳಿಂದಲೂ ಪಾಕ್ ಮೇಲೆ ಅಟ್ಯಾಕ್ ಮಾಡಿದೆ.
ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿ ಕಾರ್ಯಾಚರಣೆ ನಡೆಸಿವೆ. ಪಾಕಿಸ್ತಾನ, ಪಾಕ್ ಆಕ್ರಮಿತ ಕಾಶ್ಮೀರ ಸೇರಿದಂತೆ 9 ಭಯೋತ್ಪಾದಕ ಗುರಿಗಳ ಮೇಲೆ ನಿಖರವಾದ ಕ್ಷಿಪಣಿ ದಾಳಿಗಳನ್ನು ಭಾರತ ನಡೆಸಿದೆ.
ಆಪರೇಷನ್ ಸಿಂಧೂರ್(Operation Sindoor) ಅಡಿಯಲ್ಲಿ ಬೆಳಗಿನ ಜಾವ 1.44 ಕ್ಕೆ ಸೇನಾ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆ ಮೇಲೆ ದಾಳಿ ನಡೆಸಲಾಗಿದೆ. ಉಗ್ರರು ಅದೇ ಸ್ಥಳದಲ್ಲಿ ಕುಳಿತು ಭಾರತದ ವಿರುದ್ಧ ಭಯೋತ್ಪಾದಕ ಸಭೆ ನಡೆಸುತ್ತಿದ್ದವು ಎನ್ನಲಾಗಿದೆ.