ಮಂಡ್ಯ: ಅಪ್ರಾಪ್ತ ಬಾಲಕಿಗೆ, ಅಪ್ರಾಪ್ತರು ಪ್ರೀತಿಸುವಂತೆ ಒತ್ತಾಯಿಸಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಂಡ್ಯ (mandya) ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಂಪನ(15) ಬಾಲಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಅಪ್ರಾಪ್ತ ಬಾಲಕರು ಬಾಲಕಿಯನ್ನು ಪ್ರೀತಿಸುವ ವಿಚಾರವಾಗಿ ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ. ಅಲ್ಲದೇ, ಬಾಲಕಿಗೆ ಪ್ರೀತಿಸುವಂತೆ ಕೂಡ ಬಾಲಕರು ಒತ್ತಾಯಿಸಿದ್ದಾರೆ. ಅಲ್ಲದೇ, ಯುವಕರ ಮಾತಿನ ಚಕಮಕಿಯ ಆಡಿಯೋ ವೈರಲ್ ಆಗಿದೆ.
ಅಷ್ಟೇ ಅಲ್ಲ, ಅದನ್ನು ಬಾಲಕರು, ಮೃತ ಬಾಲಕಿಯ ತಾಯಿಯ ವಾಟ್ಸಪ್ ಗೂ ಕಳುಹಿಸಿದ್ದಾರೆ. ಇದರಿಂದಾಗಿ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ಅಪ್ರಾಪ್ತ ಬಾಲಕರು ಪರಾರಿಯಾಗಿದ್ದು, ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾಗಿರುವ ಬಾಲಕರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.