ಕನಕಪುರ : ರಾಜ್ಯಕ್ಕೆ ಹೃದಯಾಘಾತ ದೊಡ್ಡ ತಲೆಬಿಸಿಯಾಗಿ ಕಾಣುತ್ತಿದೆ. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಹೃದಯಘಾತ ಪ್ರಕರಣಗಳು ಹೆಚ್ಚಾಗಿ ಕಾಣಿಸುತ್ತಿವೆ. ಈ ಮಧ್ಯೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೊಗ್ಗೆದೊಡ್ಡಿ ಗ್ರಾಮದ ಮಾದೇಶ್ ನಾಯ್ಕ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮಾದೇಶ್ ನಾಯ್ಕ್, ಫಾರೆಸ್ಟ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಬೆಳಗಿನ ಜಾವ ಅವರಿಗೆ ಸಣ್ಣ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವುದಕ್ಕೆ ಕುಟುಂಬಸ್ಥರು ಮುಂದಾಗಿದ್ದು, ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.



















