ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ಕನ್ನಡ ಸೀರಿಯಲ್ ನಟಿಗೆ ಕಿರುಕುಳ ನೀಡಿದ ಆರೋಪ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ ವೆಂಕಟೇಶ ರೆಡ್ಡಿ ಪೋಲಿಸರು ಬಂಧಿಸಿದ್ದಾರೆ.
2021ರಲ್ಲಿ ಪರಿಚಯವಾಗಿದ್ದ ನಟಿಗೆ ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪ ಇದೀಗ ಕೇಳಿ ಬಂದಿದೆ. ಸಿನಿಮಾರಂಗದ ಜೊತೆ ಸಂಪರ್ಕ ಹೊಂದಿದ್ದ ಅರವಿಂದ್ ರೆಡ್ಡಿ. ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿಯು ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ.
9 ಕನ್ನಡ ಚಲನಚಿತ್ರಗಳಲ್ಲಿ ನಟಿಸಿರುವ ಈ ನಟಿಯನ್ನ ಶ್ರೀಲಂಕ ಲಾರ್ಸ್ ಕ್ರಿಕೆಟ್ ಕಪ್ ಉದ್ಘಾಟನಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಹ್ವಾನಿಸಿದ್ದರಂತೆ. ಅಲ್ಲಿಂದ ನಟಿಗೆ ಅರವಿಂದ್ ವೆಂಕಟೇಶ್ ರೆಡ್ಡಿ ಅವರ ಪರಿಚಯವಾಗಿದೆ. ಬಳಿಕ ನಟಿ ಮೇಲೆ ಕಾಳಜಿ, ಪ್ರೀತಿ ತೋರಿದ್ದ. ನಂತರ ಆಗಸ್ಟ್ 22 ರಲ್ಲಿ ನಟಿ ಜೊತೆಗೆ ಅಂತರ ಕಾಯ್ದುಕೊಂಡಿದ್ದರೆಂದು ತಿಳಿದು ಬಂದಿದೆ.
ಈ ಸಂಬಂಧ ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಅರವಿಂದ ವೆಂಕಟೇಶ ರೆಡ್ಡಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ಹಳೇ ದ್ವೇಷಕ್ಕೆ ಇಡೀ ಕುಟುಂಬಕ್ಕೆ ವಿಷ ಹಾಕಿದ ‘ಪಾಪಿ’ರೆಡ್ಡಿ



















