ಉಡುಪಿ | ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಶನಿವಾರ ಖಾಸಗಿ ಆಸ್ಪತ್ರೆಯಲ್ಲಿ (ಫೆ7) ನಿಧನ ಹೊಂದಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿದ್ದು, ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ರಾಜಕೀಯದಲ್ಲಿ ತನ್ನದೇ ಛಾಪು ಮೂಡಿಸಿದ್ದ ಅಪ್ಪಣ್ಣ ಹೆಗ್ಡೆಯವರು 1983ರಿಂದ 1985ರವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಜನತಾ ಪಕ್ಷದ ಶಾಸಕರಾಗಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿಯಾಗಿದ್ದು, ಅನೇಕ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಅಪ್ಪಣ್ಣ ಹೆಗ್ಡೆ ಅವರ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದು, ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನ ಅಗಲಿದ್ದಾರೆ.
ಇದನ್ನೂ ಓದಿ ; ಮೆಟ್ರೋ ದರ ಏರಿಸಿದ್ದು ನಾವಲ್ಲ ಎಂದ ಸಿಎಂಗೆ ದಾಖಲೆ ಸಮೇತ ತೇಜಸ್ವಿ ಸೂರ್ಯ ತಿರುಗೇಟು!


















