ಮೈಸೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yediyurappa) ಅವರ ಆಪ್ತ ಕಾ.ಪು.ಸಿದ್ದಲಿಂಗಸ್ವಾಮಿ(56) (Kapu Siddalingaswamy) ನಿಧನರಾಗಿದ್ದಾರೆ.
ಕಳೆದ ಹಲವು ತಿಂಗಳಿಂದ ಕಾಪು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆ (Apollo Hospital)ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಾಪು ಸಿದ್ದಲಿಂಗಸ್ವಾಮಿ 2013ರಲ್ಲಿ ವರುಣದಿಂದ KJP ಅಭ್ಯರ್ಥಿಯಾಗಿ ಹಾಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈಗ ಕಾ.ಪು.ಸಿದ್ದಲಿಂಗಸ್ವಾಮಿ ಅಂತ್ಯಕ್ರಿಯೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆಯಲಿದೆ. ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ನಿನ್ನೆಯಷ್ಟೇ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಲ್ಲಿ ಸೋಮಣ್ಣ ಪರ ಕಾಪು ಅವರು ಕೆಲಸ ಮಾಡಿದ್ದರು.