ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ, ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ನಿನ್ನೆ (ಆ.18) ಕೊನೆಯುಸಿರೆಳೆದಿದ್ದಾರೆ.
ದೀರ್ಘಕಾಲದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿ ಮೃತರಾಗಿದ್ದಾರೆ. ಅವರ ಅಗಲಿಕೆಗೆ ರಾಜ್ಯ ರಾಜಕೀಯ ವಲಯ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ದೀರ್ಘಕಾಲದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಜಯನಗರದ ಮಗಳ ನಿವಾಸದಲ್ಲಿ ವಾಸವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಬಸವರಾಜ ಬೊಮ್ಮಾಯಿ ಅವರ ಬಿಜೆಪಿ ಸರ್ಕಾರದಲ್ಲಿ 2021 ರಿಂದ 2023 ರವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ತುಮಕೂರು ಜಿಲ್ಲೆಯ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಸದ್ಯ ಬಿ.ಸಿ. ನಾಗೇಶ್ ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನ ಇಡಲಾಗಿದೆ. ಮಧ್ಯಾಹ್ನದ ಬಳಿಕ ಬೆಂಗಳೂರಿನಿಂದ ಸ್ವಕ್ಷೇತ್ರ ತಿಪಟೂರಿಗೆ ಪಾರ್ಥಿವ ಶರೀರ ರವಾನಿಸಿ, ಸಾರ್ವಜನಿಕ ದರ್ಶನದ ಬಳಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!


















