ಕೊಡಗು : ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ವಾಲ್ಲೂರು ತ್ಯಾಗತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿ ಪರಿಣಾಮ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯೆ ಜಲಜಾಕ್ಷಿ (53) ದುರ್ಮರಣ ಹೊಂದಿದ್ದಾರೆ.
ಜಲಜಾಕ್ಷಿ ಬಾಳೆಗುಂಡಿ ಹಾದಿ ನಿವಾಸಿಯಾಗಿದ್ದು, ಅವರು ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಾಡಾನೆ ಏಕಾಏಕಿ ದಾಳಿ ನಡೆಸಿ ಬಲಿ ಮಾಡಿದೆ. ಇತ್ತೀಚೆಗೆ ಸದಸ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಜಲಜಾಕ್ಷಿ ಈ ದುರಂತದಲ್ಲಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾಡುಪ್ರಾಣಿಗಳ ಹಾವಳಿ ತಡೆಯುವಂತೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಕಡತದಲ್ಲೇ ಉಳಿದ ದೂರು ಅರ್ಜಿ..ಪೂಜೆ ಮಾಡಿ ಎಂದು ಗಂಧದ ಕಡ್ಡಿ ರವಾನೆ



















