ಜಾರ್ಖಂಡ್ : ದೀರ್ಘಕಾಲದ ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ (81) ಇಂದು(ಸೋಮವಾರ) ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ತಮ್ಮ ತಂದೆಯ ನಿಧನವನ್ನು ಜಾರ್ಖಂಡ್ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೇನ್ ದೃಢಪಡಿಸಿದ್ದಾರೆ.
ಅನಾರೋಗ್ಯದ ಸಮಸ್ಯೆಯಿಂದ ಒಂದು ತಿಂಗಳಿಗೂ ಹೆಚ್ಚು ಕಾಲ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಬು ಸೊರೇನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದರೇ, ಇಂದು(ಆ.04) ಅಸ್ತಂಗತರಾಗಿದ್ದಾರೆ.